7th Pay Commission; ವಾರಕ್ಕೆ 5 ದಿನದ ಕೆಲಸಕ್ಕೆ, ಸಚಿವಾಲಯದ ಸಿಬ್ಬಂದಿ ಬೇಡಿಕೆ

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗವನ್ನು ರಚನೆ ಮಾಡಿದೆ. ನವೆಂಬರ್‌ನಲ್ಲಿ ಈ ಆಯೋಗ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆ ಇದೆ. ವೇತನ, ಭತ್ಯೆ ಹೆಚ್ಚಳ ಸೇರಿದಂತೆ ರಾಜ್ಯ ಸರ್ಕಾರಿ ನೌಕರರು ಆಯೋಗಕ್ಕೆ ಹಲವು ಮನವಿಗಳನ್ನು ಸಲ್ಲಿಕೆ ಮಾಡಿದ್ದಾರೆ. ವೇತನ ಎಷ್ಟು ಏರಿಕೆಯಾಗಲಿದೆ? ಎಂದು ಕಾದು ಕುಳಿತಿದ್ದಾರೆ. ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ ವೇತನ ಆಯೋಗಕ್ಕೆ ವರದಿಯೊಂದನ್ನು ಸಲ್ಲಿಕೆ ಮಾಡಿದೆ. ಈ ವರದಿಯಲ್ಲಿ ವೇತನ ಪರಿಷ್ಕರಣೆ, ಭತ್ಯೆ ಹೆಚ್ಚಳ, ಹೊಸ ಪಿಂಚಣಿ ಯೋಜನೆಯನ್ನು ರದ್ದು ಮಾಡುವುದು ಸೇರಿದಂತೆ ಹಲವಾರು ಅಂಶಗಳ ಕುರಿತು ಗಮನ ಸೆಳೆಯಲಾಗಿದೆ. ಇದೇ ವರದರಿಯಲ್ಲಿ ಸಚಿವಾಲಯದಲ್ಲಿ ವಾರಕ್ಕೆ 5 ದಿನಗಳ ಕೆಲಸದ ದಿನಗಳ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಮನವಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಬ್ಯಾಂಕುಗಳಲ್ಲಿ ಇದೇ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಚರ್ಚೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ ಸಹ ಇದೇ ಬೇಡಿಕೆಯನ್ನು ಆಯೋಗಕ್ಕೆ ಸಲ್ಲಿಸಿದೆ. ಸರ್ಕಾರಕ್ಕೆ ಆಯೋಗ ಏನು ಶಿಫಾರಸು ಮಾಡಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವಾಲಯದ ವರದಿಯ ಶಿಫಾರಸುಗಳು * ಸಚಿವಾಲಯದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ/ ನೌಕರರು ಸರ್ಕಾರಿ ಕೆಲಸವನ್ನು ಸೃಜನಾತ್ಮಕವಾಗಿ ಮಾಡಲು ಉತ್ತೇಜಿಸಲು ನೀಡುತ್ತಿರುವ ಸರ್ವೋತ್ತಮ ಪ್ರಶ...