ರಾಜ್ಯ ಸರ್ಕಾರಿ ನೌಕರರಿಗೆ ಶುಭಸುದ್ದಿ; ನವೆಂಬರ್ ನಲ್ಲಿ ಏಳನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸಾಧ್ಯತೆ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಶುಭಸುದ್ದಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ನವೆಂಬರ್ ನಲ್ಲಿ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಿದೆ.  ಬೆಂಗಳೂರು (ಅ.30):  ಕೇಂದ್ರ ಹಾಗೂ ಇತರ ರಾಜ್ಯ ಸರ್ಕಾರಗಳು ಉದ್ಯೋಗಿಗಳಿಗೆ ಶೇ.4ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ತನ್ನ ಉದ್ಯೋಗಿಗಳಿಗೆ  ನವೆಂಬರ್ ನಿಂದಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸುತ್ತಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ ನೀಡಿದ್ದು, 2022ರ ನವೆಂಬರ್ ನಲ್ಲಿ ರಚನೆಗೊಂಡ ಏಳನೇ ವೇತನ ಆಯೋಗ ತನ್ನ ಶಿಫಾರಸ್ಸುಗಳನ್ನು ಮುಂದಿನ ತಿಂಗಳೊಳಗೆ ಸಲ್ಲಿಕೆ ಮಾಡುವ ನಿರೀಕ್ಷೆಯಿದೆ. ಅದರ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಏಳನೇ ವೇತನ ಆಯೋಗಕ್ಕೆ ಅದರ ಶಿಫಾರಸ್ಸುಗಳನ್ನು ನವೆಂಬರ್ ನಲ್ಲಿ ಸಲ್ಲಿಕೆ ಮಾಡುವಂತೆ ತಿಳಿಸಲಾಗಿದೆ ಎಂಬ ಮಾಹಿತಿಯನ್ನು ಕೂಡ ಪರಮೇಶ್ವರ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಕೂಡ ನೀಡಿದ್ದಾರೆ. ಅಲ್ಲದೆ, ಸರ್ಕಾರಿ ಉದ್ಯೋಗಿಗಳು ಭಯ...